ಮಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೇ 6 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಂಗಳೂರು ವಿಭಾಗದ ಬಿಜೆಪಿ ಉಸ್ತುವಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.
ಬುಲ್ಡೋಜರ್ ಬಾಬಾ ಖ್ಯಾತಿಯ ಉತ್ತರಪ್ರದೇಶದ ಸಂತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6 ರಂದು ಮಧ್ಯಾಹ್ನ ಪುತ್ತೂರು ಹಾಗೂ ಬಂಟ್ವಾಳದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ 3 ಗಂಟೆಗೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ರಾತ್ರಿ ಮುರುಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.