ಭೋಪಾಲ: ಮಧ್ಯಪ್ರದೇಶದ ಖಾರ್ಗೋನ್ನಲ್ಲಿ ಮಂಗಳವಾರ ಬಸ್ ಸೇತುವೆಯಿಂದ ಬಿದ್ದು ಕನಿಷ್ಠ 15 ಜನರು ಸಾವನ್ನಪ್ಪಿದ್ದರೆ, ಸುಮಾರು 25 ಜನರು ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಅಪಘಾತದ ಸಮಯದಲ್ಲಿ ಬಸ್ನಲ್ಲಿ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇಂದೋರ್ಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಸ್ಕಿಡ್ ಆಗಿ ಕೆಳಕ್ಕೆ ಬಿದ್ದಿದೆ.
ಜಿಲ್ಲಾಧಿಕಾರಿ ಶಿವರಾಜ್ ಸಿಂಗ್ ವರ್ಮಾ ಅಪಘಾತ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ.
ಮಧ್ಯಪ್ರದೇಶ ಸರ್ಕಾರವು ಮೃತರ ಕುಟುಂಬ ಸದಸ್ಯರಿಗೆ 4 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ತೀವ್ರವಾಗಿ ಗಾಯಗೊಂಡವರಿಗೆ 50,000 ರೂ ಮತ್ತು ಗಾಯಗೊಂಡವರಿಗೆ 25,000 ರೂ. ವೈದ್ಯಕೀಯ ನೆರವನ್ನು ರಾಜ್ಯ ಸರ್ಕಾರ ಘೋಷಿಸಿದೆ.