ಬೆಂಗಳೂರು: ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಹಗುರದಿಂದ ಮಧ್ಯಮ ಮಳೆಯಾಗುವ ಮತ್ತು 30-40 ಕಿಮೀ/ಪ್ರತಿ ಘಂಟೆ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮೇ 10 ರಂದು ಕರಾವಳಿಯ ಉಡುಪಿ ಮತ್ತು ದ.ಕ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ (64.5 ಮಿ.ಮೀ ನಿಂದ 115.5 ಮಿ.ಮೀ) ಸಂಭವಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.