ಇಂದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ

ಬಂಗಾಳಕೊಲ್ಲಿಯಲ್ಲಿ ಮೋಚ ಚಂಡಮಾರುತವು ಅತ್ಯಂತ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಭಾನುವಾರ ಮೇ 14ರಂದು ಮೋರ್ಚಾ ಚಂಡಮಾರುತ ಬಾಂಗ್ಲಾದೇಶ, ಮಯನ್ಮಾರ್ ಗಡಿ ಭಾಗದಲ್ಲಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಈ ಚಂಡಮಾರುತವು ಪಶ್ಚಿಮ ಬಂಗಾಳ, ಒಡಿಶಾ, ಮಯನ್ಮಾರ್ ನ ಹಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಕಾರಣವಾಗಲಿದೆ. ಭಾನುವಾರದವರೆಗೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಪ್ರತಿ ಗಂಟೆಗೆ 175km ವೇಗದಲ್ಲಿ ಗಾಳಿ ಬೀಸಲಿದ್ದು, ಶುಕ್ರವಾರವೇ ಬಾಂಗ್ಲಾ ಸರ್ಕಾರ ಸುಮಾರು 5 ಲಕ್ಷ ಜನರನ್ನು ಸ್ಥಳಾಂತರ ಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ಬಹಳ ಅಪಾಯಕಾರಿ ಚಂಡಮಾರುತ ಇದಾಗಿದ್ದು, ಸಾವಿರಾರು ಮಂದಿ ಮೀನುಗಾರರು ಮತ್ತು ಕರಾವಳಿಯ ಜನರಿಗೆ ಹಾನಿ ಉಂಟು ಮಾಡುವ ಸಾಧ್ಯತೆ ಇದೆ.

ಈ ಚಂಡಮಾರುತದಿಂದಾಗಿ ಧಿಡೀರ್ ಪ್ರವಾಹ ಹಾಗೂ ಭೂಕುಸಿತಗಳು ಕೂಡ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರತದಲ್ಲೂ ಈ ‘ಮೋಚಾ ‘ ಹಾನಿ ಉಂಟುಮಾಡಲಿದ್ದು, ಕೇರಳ, ಒಡಿಸ್ಸಾ, ಕರ್ನಾಟಕದಲ್ಲೂ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.