ಉಡುಪಿ: ಪೌರ ಕಾರ್ಮಿಕ ನಾಪತ್ತೆ

ಉಡುಪಿ: ಉಡುಪಿ ನಗರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ ಪುತ್ತೂರು ಗ್ರಾಮದ ಕುದ್ಮಲ್ ರಂಗರಾವ್ ನಗರದ ನಿವಾಸಿ ವಿನೋದ್ (30) ಎಂಬ ವ್ಯಕ್ತಿಯು ಮೇ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.