ಕುಂದಾಪುರ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯಮಾಪನ ಫತಾಂಶ ಬಂದಿದ್ದು, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಸತತ 5 ನೇ ಬಾರಿ ನೂರಕ್ಕೆ ನೂರು ಫಲಿತಾಂಶ ದಾಖಲಿಸಿದೆ. ಮರುಮೌಲ್ಯಮಾಪನದಲ್ಲಿ ವಿಜ್ಞಾನ ವಿಭಾಗದ ಪ್ರಣಮ್ಯ 590 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್, ಇಂಚರ 589 ಅಂಕ ಪಡೆಯುವ ಮೂಲಕ 8ನೇ ರ‍್ಯಾಂಕ್, ಸಂಜನಾ ಶೆಟ್ಟಿ 587 ಅಂಕಗಳನ್ನು ಪಡೆದು 10 ನೇ ರ‍್ಯಾಂಕ್ ಪಡೆದಿರುತ್ತಾಳೆ. ರಾಜ್ಯಮಟ್ಟದಲ್ಲಿ ಒಟ್ಟು 13 ರ‍್ಯಾಂಕುಗಳನ್ನು ಪಡೆಯುವುದರೊಂದಿಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಹೊಸ ದಾಖಲೆ ಬರೆದಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
















