ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರು ಬಳಸಬಹುದಾದ ವಸ್ತುಗಳ ಸಂಗ್ರಹ ಮಾಡಲು ಮೇ 20 ರಿಂದ ಜೂನ್ 5 ರ ವರೆಗೆ ರೆಡ್ಯೂಸ್, ರಿಯೂಸ್ ಹಾಗೂ ರಿಸೈಕಲ್ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮರುಬಳಕೆ ಮತ್ತು ಪುನರ್ಬಳಕೆ ಹಾಗೂ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, ನನ್ನ ಜೀವನ-ನನ್ನ ಸ್ವಚ್ಛ ನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬಳಸಿದ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪಿಸಲಾಗುವುದು.
ಸಾರ್ವಜನಿಕರು ಈ ಕೇಂದ್ರದಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ವಿವಿಧ ಬಗೆಯ ಎಲೆಕ್ಟ್ರಾನಿಕ್ ವಸ್ತುಗಳನ್ನು ನೀಡಬಹುದಾಗಿದ್ದು, ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.