ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಶುಭಕೋರಿದ್ದಾರೆ.
ಟ್ವೀಟ್ ಮೂಲಕ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು” ಎಂದು ಟ್ವಿಟರ್ ಮೂಲಕ ಹೇಳಿದ್ದಾರೆ.