ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಹಳೆಯ ವಿದ್ಯಾರ್ಥಿಯಾಗಿರುವ ಶಶಿಕಿರಣ್ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಪುತ್ರರಾಗಿದ್ದಾರೆ. ಇವರು 23 ವರ್ಷಗಳ ಅನುಭವವನ್ನು ಹೊಂದಿದ್ದಾರೆ.
ಇವರು ಸಾಂವಿಧಾನಿಕ ಕಾನೂನು, ಆಡಳಿತಾತ್ಮಕ ಕಾನೂನು, ಮಧ್ಯಸ್ಥಿಕೆ ಕಾನೂನು, ಆಸ್ತಿ ಹಕ್ಕುಗಳು, ಕುಟುಂಬ ಕಾನೂನು, ಸಾಲ ವಸೂಲಾತಿ, ಪರಿಸರ ಕಾನೂನುಗಳು ಮತ್ತು ಬ್ಯಾಂಕಿಂಗ್ ಕಾನೂನುಗಳಲ್ಲಿ ಪರಿಣತಿ ಹೊಂದಿದ್ದಾರೆ.












