ಮೂಡಬಿದ್ರೆ: ಪ್ರತಿಯೊಬ್ಬರೂ ತಮ್ಮೊಳಗಿನ ಪ್ರತಿಭೆ ಏನೆಂಬುದನ್ನು ತಾವು ಮೊದಲು ತಿಳಿದುಕೊಂಡು ಅದಕ್ಕೆ ತಕ್ಕ ಉದ್ಯೋಗ ರಂಗವನ್ನು ಪ್ರವೇಶಿಸಿ ಮುಂದುವರಿದಾಗ ಪ್ರಗತಿ ಹೊಂದಲು ಸಾಧ್ಯ ಎಂದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ| ಸಚ್ಚಿದಾನಂದ ಹೇಳಿದರು.
ಅವರು ಆಳ್ವಾಸ್ ಎಜುಕೇಶನ್ ಫೌಂಡೇ ಶನ್ ಆಶ್ರಯದಲ್ಲಿ ವಿದ್ಯಾಗಿರಿಯಲ್ಲಿ ಆಯೋಜಿಸಲಾದ 11ನೇ ವರ್ಷದ ಆಳ್ವಾಸ್ ಪ್ರಗತಿ-2019 ಉದ್ಯೋಗ ಮೇಳವನ್ನು ಡಾ| ವಿ.ಎಸ್. ಆಚಾರ್ಯಸಭಾಂಗಣದಲ್ಲಿ ನಡೆದ ಸಮಾರಂಭ ದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಅಭ್ಯರ್ಥಿಗಳಿಗೆ ಚೀನ, ಅಮೆರಿಕ, ಮಧ್ಯಪ್ರಾಚ್ಯ ಮೊದಲಾದ ದೇಶಗಳಲ್ಲಿ ಅಪಾರ ಬೇಡಿಕೆ ಇದೆ ಎಂದು ಅವರು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮಾನಾಥ ಕೋಟ್ಯಾನ್ ಮಾತ ನಾಡಿ, ವಿದ್ಯಾರ್ಜನೆಯ ಜತೆಗೆ ತಮ್ಮ ಪ್ರತಿಭೆಗೆ ಸೂಕ್ತವಾದ ಉದ್ಯೋಗ ರಂಗವನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ‘ಕಲಿಕೆಯೊಂದಿಗೆ ಸಂವಹನಶೀಲತೆಯೇ ಮೊದಲಾದ ಕೌಶಲಗಳನ್ನೂ ಮೈಗೂಡಿಸಿಕೊಳ್ಳುವುದು ಅವಶ್ಯ’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯಂ ಎಡಪಡಿತ್ತಾಯ, ಮಾಜಿ ಶಾಸಕ ಕೆ. ಅಭಯಚಂದ್ರ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು.
ಆಳ್ವಾಸ್ ಎಜುಕೇಶನ್ ಫೌಂಡೇ ಶನ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪ್ರಸ್ತಾವನೆಗೈದರು. ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗ ಮುಖ್ಯಸ್ಥ ಪ್ರೊ| ಅಜಿತ್ ಹೆಬ್ಟಾರ್ ವಂದಿಸಿದರು. ಆಳ್ವಾಸ್ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ವೇಣುಗೋಪಾಲ್ ಶೆಟ್ಟಿ ನಿರೂಪಿಸಿದರು.












