ಉಡುಪಿ: ನಗರದ ಇಂದ್ರಾಳಿ ರೈಲ್ಪೆ ನಿಲ್ದಾಣ ಸಮೀಪದ ಪೆಟ್ರೋಲ್ ಬಂಕ್ ಪಕ್ಕದ ಕಟ್ಟಡಕ್ಕೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ಭಾನುವಾರ ರಾತ್ರಿ ಸಂಭವಿಸಿದ್ದು, ಅವಘಡದಿಂದ ಕಟ್ಟಡದ ಕೆಳ ಮಹಡಿಯಲ್ಲಿದ್ದ ಬೈಕ್ ಶೋರೂಂ ಸುಟ್ಟು ಹೋಗಿದೆ.
ಕಟ್ಟಡದಲ್ಲಿ ದಂತ ಚಿಕಿತ್ಸಾ ಆಸ್ಪತ್ರೆ, ವಾಣಿಜ್ಯ ಮಳಿಗೆಗಳಿವೆ. ಘಟನೆಯಿಂದ ಅಪಾರ ಹಾನಿ ಸಂಭವಿಸಿದೆ.
ಸ್ಥಳಕ್ಕೆ ಉಡುಪಿಯಿಂದ ಎರಡು ಅಗ್ನಿಶಾಮಕ ದಳ ವಾಹನ ಆಗಮಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ತಿಳಿದು ಬಂದಿದೆ.












