ಉಡುಪಿ: ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ

ಉಡುಪಿ: ಮೀನುಗಾರಿಕೆಗೆ ಬೊಟಿನಲ್ಲಿ ತೆರಳಿದ ಒಡಿಸ್ಸಾ ಮೂಲಕ ಮಜಾಯಿ ಮಜಿ (31) ಎಂಬಾತನು ಮೇ.11 ರಂದು ರಾತ್ರಿ 8 ಗಂಟೆಯ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವ ವೇಳೆ ಆಯಾ ತಪ್ಪಿ ಸಮುದ್ರಕ್ಕೆ ಬಿದ್ದು, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಒರಿಸ್ಸಾ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.