ಕಾಂಗ್ರೆಸ್ ಗ್ಯಾರಂಟಿ ಜಾರಿ ವಿಳಂಬ: ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನತೆಗೆ ನೀಡಿದ 5 ಗ್ಯಾರಂಟಿ ಕಾರ್ಡ್ ಗಳ ಭರವಸೆಯನ್ನು ಸರಕಾರ ಅಸ್ತಿತ್ವಕ್ಕೆ ಬಂದು 1 ವಾರ ಕಳೆದರೂ ಜಾರಿ ಮಾಡದೇ ಇರುವುದನ್ನು ಜಿಲ್ಲಾ ಬಿಜೆಪಿ ಖಂಡಿಸಿದೆ.

ಶನಿವಾರದಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಾಂಗ್ರೆಸ್ ನಡೆಯನ್ನು ಖಂಡಿಸಿದರು

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.