ಕಾಪು: ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನನ್ನು ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣದ ಉದ್ದೇಶಕ್ಕೆ ಕಾಯ್ದಿರಿಸಲಾಗಿದ್ದು ಶುಕ್ರವಾರದಂದು ಅದಮಾರು ಮಠದ ಶ್ರೀ ಈಶಪ್ರಿಯ ಶ್ರೀಪಾದರೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೋ ಪೂಜೆ ನೆರವೇರಿಸುವ ಮೂಲಕ ಗೋ ರುದ್ರಭೂಮಿಗೆ ಕಾಮಗಾರಿಗೆ ಭೂಮಿ ಪೂಜೆ ಮಾಡಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ, ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಗೆ ಭೂಮಿ ಪೂಜೆ ಮೂಲಕ ಅಡಿಗಲ್ಲು ಹಾಕಲಾಯಿತು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಎಲ್ಲರೂ ಗ್ರಾಮ ಪಂಚಾಯತ್ ಅಧ್ಯಕ್ಷ ದ ಕೆ. ಜಯಂತ್ ಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ ಸುವರ್ಣ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯ ಕೇಶವ ಮೋಯ್ಲಿ, ಕಾಪು ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ, ಕಂದಾಯ ನಿರೀಕ್ಷಕ ಸುಧೀರ್ ಶೆಟ್ಟಿ, ಕಾಪು ಮುಖ್ಯ ಪಶುವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ, ಡಾ. ವಿಜಯ ಕುಮಾರ್, ಕಾಪು ತಾಲೂಕು ಪಂಚಾಯತ್ ಸಹಾಯಕ ಅಭಿಯಂತರೆ ಚಂದ್ರಕಲಾ, ಎಲ್ಲೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು.