ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಗ್ನಿ ಅವಘಡ ತಡೆಯುವಿಕೆ ಕಾರ್ಯಾಗಾರ

ಕಟಪಾಡಿ: ತ್ರಿಶಾ ವಿದ್ಯಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಅಗ್ನಿ ಶಾಮಕದಳ ಉಡುಪಿ ಇದರ ಸಹಯೋಗದೊಂದಿಗೆ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆಯನ್ನು ಶನಿವಾರದಂದು ಹಮ್ಮಿಕೊಳ್ಳಲಾಯಿತು.

ಅಗ್ನಿ ಶಾಮಕ ದಳದ ಅಧಿಕಾರಿಗಳಾದ ಸತೀಶ್ ಎನ್. ಮತ್ತು ತಂಡವು ಬೆಂಕಿ ಅವಘಡದ ಕಾರಣಗಳು ಹಾಗೂ ಬೆಂಕಿ ಅವಘಡಗಳನ್ನು ತಡೆಯುವ ವಿಧಾನಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ, ಪ್ರಾಯೋಗಿಕ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳಿಂದ ಮಾಡಿಸಿದರು.

ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೋ. ಗುರುಪ್ರಸಾದ್ ರಾವ್, ತ್ರಿಶಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೋ. ಇಂದುರೀತಿ, ವೈ.ಆರ್. ಸಿ ಸಂಚಾಲಕಿ ಪ್ರೋ. ಪೂರ್ಣಿಮಾ ಹಾಗೂ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅನನ್ಯ ಕಾರ್ಯಕ್ರಮ ನಿರೂಪಿಸಿದರು.