ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿಶ್ವ ಆಹಾರ ಸುರಕ್ಷತಾ ದಿನದ ಆಚರಣೆ ಅಂಗವಾಗಿ ಕಲುಷಿತ ಆಹಾರ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು ಮತ್ತು ಆಹಾರದ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಲು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಯಿತು.
ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವೆಂದು ವಿಶ್ವ ಆರೋಗ್ಯ ಸಂಸ್ಥೆಯು ಆಚರಿಸುತ್ತದೆ. ಇದರ ಮುಖ್ಯ ಉದ್ದೇಶ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದಾಗಿದೆ.
ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಆಹಾರದ ಸುರಕ್ಷತೆ ಕುರಿತು ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು.
ಕಾಲೇಜಿನ ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್ ವಿದ್ಯಾರ್ಥಿ ಆಹಾರ ಜಾಗೃತಿಯ ಕುರಿತು ಮಾತನಾಡಿದರು.
ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಶ್ರೀಮತಿ ಹೀನಾ ಕೌಸರ್ ಆಹಾರ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಆಹಾರ ತಂತ್ರಜ್ಞಾನ ವಿಭಾಗದ ಉಪನ್ಯಾಸಕಿಯರಾದ ವಿನಂತಿ ಮತ್ತು ಶ್ರೀ ಲಕ್ಷ್ಮೀ ಹಾಗೂ ಎಲ್ಲಾ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಆಹಾರ ತಂತ್ರಜ್ಞಾನದ ವಿದ್ಯಾರ್ಥಿ ದೀಪಿಕಾ ನಿರೂಪಿಸಿದರು, ಪ್ರಾಂಜಲಿ ಸ್ವಾಗತಿಸಿ , ವಿದ್ಯಾರ್ಥಿನಿ ಚಿನ್ಮಯಿ ವಂದಿಸಿದರು.