ಸ್ಯಾಂಡಲ್ವುಡ್ನಲ್ಲಿ ಕೆ.ಆರ್.ಜಿ ಸಂಸ್ಥೆ ಬಿಡುಗಡೆ ಮಾಡುವ ಎಲ್ಲ ಸಿನಿಮಾಗಳು ಸೂಪರ್ ಹಿಟ್ ಆಗುತ್ತವೆ. ಇದು ಕರ್ನಾಟಕ ಜನತೆಗೆ ತಿಳಿದಿರುವ ವಿಚಾರ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷಕರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಸಿನಿಮಾವನ್ನು ಕರ್ನಾಟಕದಾದ್ಯಂತ ವಿತರಣೆ ಮಾಡುವ ಹೊಣೆ ಹೊತ್ತಿರೋದು.
ದೇಶ, ವಿದೇಶದಾದ್ಯಂತ ಧೂಳೆಬ್ಬಿಸಿದ ಕೆಜಿಎಫ್ 1, ಕೆಜಿಎಫ್ 2, ಕಾಂತಾರ, ಚಾರ್ಲಿ 777, ಗಂಧದ ಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ್ದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ‘ಆದಿಪುರುಷ್’ ಚಿತ್ರವನ್ನು ಕನ್ನಡ ಭಾಷೆಯಲ್ಲಿ ರಿಲೀಸ್ ಮಾಡುವ ಜವಾಬ್ದಾರಿ ಹೊತ್ತುಕೊಂಡಿದೆ.
ನಮ್ಮ ಹಿಂದೂ ಸಂಸ್ಕೃತಿಯ ಮಹಾಕಾವ್ಯ ಎಂದೇ ಹೇಳಲ್ಪಡುವ ಪವಿತ್ರ ಗ್ರಂಥ ರಾಮಾಯಣದ ಎಳೆ ಆಧರಿಸಿ ತಯಾರಿಸಿರುವ ಚಿತ್ರ ಆದಿಪುರುಷ್. ಟಿ ಸೀರೀಸ್ ಮತ್ತು ರೆಟ್ರೋಫಿಲ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಕಥೆ ಹೆಣೆದು ನಿರ್ದೇಶನ ಮಾಡುತ್ತಿರುವುದು ಓಂ ರಾವತ್ಅವರು. ಆದಿಪುರುಷ್ ಚಿತ್ರವು ಏಕಕಾಲಕ್ಕೆ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಿದೆ. ಚಿತ್ರದ ತಾರಾಗಣದಲ್ಲಿ ಪ್ರಭಾಸ್, ಕೃತಿ ಸನೋನ್ , ಸೈಫ್ ಅಲಿ ಖಾನ್, ಸನ್ನಿ ಸಿಂಗ್, ದೇವದತ್ತ ನಾಗೇ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
“ಆದಿಪುರುಷ್ ಚಿತ್ರದ ಕರ್ನಾಟಕದ ವಿತರಣೆ ನಮಗೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ” ಎಂದು ಹೊಂಬಾಳೆ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕರು ಮತ್ತು ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರು ಆಗಿರುವ ಕಾರ್ತಿಕ್ ಗೌಡ ಸಂತಸ ವ್ಯಕ್ತಪಡಿಸಿದ್ದಾರೆ.
ಆದಿಪುರುಷ್ ಚಿತ್ರ ಜೂನ್ 16 ರಂದು ತೆಲುಗು, ಹಿಂದಿ, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ರಪಂಚದಾದ್ಯಂತ ಬಿಡುಗಡೆ ಆಗಲಿದೆ. ಚಿತ್ರವು ರಿಲೀಸ್ಗೂ ಮುನ್ನವೇ ಸಿನಿಮಾ 400 ಕೋಟಿ ರೂಪಾಯಿ ಬಾಚಿಕೊಂಡಿದೆ. ಪ್ರಭಾಸ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ, ಸನ್ನಿ ಸಿಂಗ್ ಲಕ್ಷ್ಮಣನಾಗಿ ಮತ್ತು ಸೈಫ್ ಅಲಿ ಖಾನ್ ರಾವಣನಾಗಿ ನಟಿಸಿದ್ದಾರೆ. ಈಗಾಗಲೇ ‘ಸಾಹೋ’, ‘ರಾಧೇಶ್ಯಂ’ ಫ್ಲಾಪ್ಗಳಿಂದ ಕಂಗೆಟ್ಟಿರುವ ಪ್ರಭಾಸ್ಗೆ ‘ಆದಿಪುರುಷ್’ ಚಿತ್ರ ಯಾವ ರೀತಿಯ ಯಶಸ್ಸನ್ನು ತಂದುಕೊಡಲಿದೆ ಎಂಬುದನ್ನು ಕಾದು ನೋಡಬೇಕು.
ನಮ್ಮ ಪೌರಾಣಿಕ ಮಹಾಕಾವ್ಯವಾದ ರಾಮಾಯಣದಲ್ಲಿರುವ ಸಾರವನ್ನು ಇಂದಿನ ಕಾಲಘಟ್ಟಕ್ಕೆ ಮತ್ತು ಇಂದಿನ ಪೀಳಿಗೆಗೆ ಅನುಗುಣವಾಗಿ ಆದಿಪುರುಷ್ ಚಿತ್ರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಚಿತ್ರವು ಪ್ರಭಾಸ್ ಮತ್ತು ಯು ವಿ ಕ್ರಿಯೇಷನ್ಸ್ ಜೊತೆಗಿನ ಕೆಆರ್ಜಿ ಸ್ಟುಡಿಯೋಸ್ ಒಡನಾಟಕ್ಕೂ ಸಾಕ್ಷಿಯಾಗಲಿದೆ.