ಉಡುಪಿ: ಜಿಲ್ಲೆಯಾದ್ಯಂತ ಖಾಸಗಿ ಬಸ್ಸುಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ಗಳಿಂದಾಗಿ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಕುರಿತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಸಾಕಷ್ಟು ದೂರುಗಳು ಬರುತ್ತಿರುವ ಹಿನ್ನೆಲೆ, ಪ್ರಕಟಣೆಯ ಏಳು ದಿನಗಳ ಒಳಗೆ ಬಸ್ಸುಗಳಲ್ಲಿನ ಕರ್ಕಶ ಹಾರ್ನ್ಗಳನ್ನು ತೆರವುಗೊಳಿಸಬೇಕು. ತಪ್ಪಿದ್ದಲ್ಲಿ ಪರವಾನಿಗೆಯನ್ನು ಅಮಾನತುಗೊಳಿಸಿ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.