ಪೆರ್ಣಂಕಿಲ: ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಜ್ಞಾನುಸಾರ ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಅಂಗವಾಗಿ ಇಂದು ಸಂಜೆ 4.00 ಗಂಟೆಗೆ ಧ್ವಜ ಸ್ಥಂಭದ ವೃಕ್ಷವನ್ನು ಭವ್ಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಗುವುದು.
ಸಂಜೆ 4.00 ಗಂಟೆಗೆ ಸರಿಯಾಗಿ ಪೆರ್ಣಂಕಿಲ ಅಂಗಾರಕಟ್ಟೆ ಸರಕಾರಿ ಆಸ್ಪತ್ರೆ ಬಳಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳು, ವಾದ್ಯಮೇಳ, ಭಜನಾ ತಂಡಗಳೊಂದಿಗೆ ವೈಭವೋಪೇತ ಮೆರವಣಿಗೆ ಆಯೋಜಿಸಲಾಗಿದ್ದು, ಭಗವದ್ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ದೇವಳದ ಪ್ರಕಟಣೆ ತಿಳಿಸಿದೆ.












