ಬೆಂಗಳೂರು: 2023-24ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕಳೆದ ತಿಂಗಳು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಇಂದು(ಜೂನ್ 15) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಇಂದು ಬೆಳಗ್ಗೆ 9.30ಕ್ಕೆ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದು, ಬೆಳಗ್ಗೆ 11 ಗಂಟೆ ನಂತರ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೇ 20 ಹಾಗೂ 21ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಿತ್ತು. ರಾಜ್ಯದ 592 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2.60 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂದು ಅದರ ಫಲಿತಾಂಶ http://kea.jar.nic.in ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ದೇಶಕಿ ಎಸ್ .ರಮ್ಯಾ ಮಾಹಿತಿ ನೀಡಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಫಲಿತಾಂಶವನ್ನು ಜೂನ್ 12 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸುಮಾರು 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ವಿವರಗಳಲ್ಲಿ ಹೊಂದಾಣಿಕೆಯಾಗದ ಕಾರಣ ಫಲಿತಾಂಶದ ದಿನಾಂಕವನ್ನು ಮುಂದುಡಲಾಗಿತ್ತು. ಮೇ 20 ರಿಂದ ಮೇ 22ರವರೆಗೆ ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಕೆಸಿಇಟಿ ಪರೀಕ್ಷೆ ನಡೆದಿದ್ದು, ರಾಜ್ಯದಲ್ಲಿ ಒಟ್ಟು 2.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆದಿದ್ದ ಪರೀಕ್ಷೆ ಇಂಜಿನಿಯರಿಂಗ್, ಆಯುರ್ವೇದ, ಹೋಮಿಯೋಪತಿ ಮತ್ತು ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿತ್ತು. ಇಂದು ಅಧಿಕೃತವಾಗಿ ಫಲಿತಾಂಶ ಪ್ರಕಟವಾಗಲಿದೆ.
ರಿಸಲ್ಟ್ ನೋಡುವ ವಿಧಾನ ಹೀಗಿದೆ
►ಕೆಇಎ ಅಧಿಕೃತ ವೆಬ್ಸೈಟ್ ►ಮುಖಪುಟದಲ್ಲಿ ಯುಜಿಸಿಇಟಿ -2023 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
►ಆಗ ನಿಮಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇನ್ನೊಂದು ಪುಟ ಓಪನ್ ಆಗುತ್ತದೆ.
►ನಂತರ ಓಪನ್ ಆದ ಪುಟದಲ್ಲಿ ನೋಂದಣಿ ಸಂಖ್ಯೆ, ಜನ್ಮ ದಿನಾಂಕ, ಮತ್ತು ಪಾಸ್ವರ್ಡ್,ನಮೂದಿಸಿ ಲಾಗಿನ್ ಆಗಿ.
►ಅಗತ್ಯವಿರುವ ವಿವರಗಳನ್ನು ನಮೂದಿಸಿ ಸೈನ್ ಇನ್ ಮೇಲೆ ಕ್ಲಿಕ್ ಮಾಡಿ.
►ನಂತರ ಪರದೆಯ ಮೇಲೆ ನಿಮ್ಮ ಯುಜಿಸಿಇಟಿ-2023 ಫಲಿತಾಂಶ ಕಾಣಸಿಗುತ್ತದೆ.
►ಅದನ್ನು ಮುಂದಿನ ರೆಫ್ರೆನ್ಸ್ಗಾಗಿ ಫಲಿತಾಂಶ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಿ.