ಕಾಪು: ಕಡಲ್ಕೊರೆತ ಪ್ರದೇಶಗಳ ಪರಿಶೀಲನೆ ನಡೆಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಕಾಪು ತಾಲೂಕಿನ‌ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಸಹಾಯಕ ಅಭಿಯಂತರ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.