ಕನ್ನಡ ಚಿತ್ರರಂಗದಲ್ಲಿ ವಿನೂತನ ಪ್ರಯೋಗ: 50 ದಿನಗಳ ಅಂತರದಲ್ಲಿ ಸಪ್ತಸಾಗರದಾಚೆ ಎಲ್ಲೋ ಎರಡು ಭಾಗಗಳು ತೆರೆಗೆ!

ಗೋಧಿ ಬಣ್ಣ ಸಾಧಾರಣ ಮೈಕಟ್ಟು ಹಾಗೂ ಕವಲುದಾರಿ ರೀತಿಯ ಎರಡು ವಿಭಿನ್ನ ಕಥಾಹಂದರವಿರುವ ಸೂಪರ್‌ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದ ಹೇಮಂತ್ ಎಂ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೋ ಬಿಡುಗಡೆಗೆ ದಿನ ನಿಗದಿಯಾಗಿದೆ. 50ದಿನಗಳ ಅಂತರದಲ್ಲಿ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು ಕನ್ನಡ ಚಿತ್ರರಂಗದಲ್ಲಿ ಇದು ಪ್ರಥಮ ಪ್ರಯೋಗವಾಗಿದೆ.

ರಕ್ಷಿತ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿರುವ ಚಿತ್ರದಲ್ಲಿ ರುಕ್ಮಣಿ ವಸಂತ್ ಹಾಗೂ ಚೈತ್ರಾ ಆಚಾರ್ ನಾಯಕಿಯರಾಗಿ ಅಭಿನಯಿಸಿದ್ದಾರೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿ, “ಅವನ ಮೊದಲು ಹಾಗೂ ಅವರ ಉಳಿದ ಕಥೆ.. ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿದೆ ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ದಿನಾಂಕವನ್ನು ಗುರುತು ಮಾಡಿಟ್ಟುಕೊಳ್ಳಿ” ಎಂದು ಟ್ವೀಟ್ ಮಾಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಮೊದಲ ಭಾಗ ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿದ್ದು, ಎರಡನೇ ಭಾಗ ಅಕ್ಟೋಬರ್ 20ರಂದು ತೆರೆಗೆ ಬರಲಿದೆ. ಈ ಎರಡೂ ಭಾಗಗಳ ನಡುವೆ 50ದಿನಗಳ ಅಂತರವಿದೆ.

ಚಿತ್ರಕ್ಕೆ ಪರಂವಃ ಪ್ರೊಡಕ್ಷನ್ಸ್ ಬಂಡವಾಳ ಹೂಡಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಬಿಡುಗಡೆ ಹಾಗೂ ಹಂಚಿಕೆ ಜವಾಬ್ದಾರಿ ಹೊತ್ತಿದೆ.