ಮಲ್ಪೆ: ಆಸ್ಪತ್ರೆಗೆಂದು ಹೋದವರು ವಾಪಾಸು ಬಾರದೇ ನಾಪತ್ತೆ

ಉಡುಪಿ: ಮಲ್ಪೆ ನಿವಾಸಿ ಸುರೇಂದ್ರ ಕಾಂಚಾನ್ (56) ಎಂಬ ವ್ಯಕ್ತಿಯು ಜೂನ್ 9 ರಂದು ಬೆಳಗ್ಗೆ 9.15 ರ ಸುಮಾರಿಗೆ ಆಸ್ಪತ್ರೆಗೆಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.