ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಡ್ಮಿಂಟನ್ ಪಂದ್ಯಾವಳಿ

ಉಡುಪಿ: ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವಿಕಸನದ ದೃಷ್ಟಿಯಿಂದ ತ್ರಿಶಾ ಸಂಸ್ಥೆಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಅಜ್ಜರಕಾಡು ಒಳಾಂಗಣ ಮೈದಾನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ.ಎ ಗೋಪಾಲಕೃಷ್ಣ ಭಟ್ ಮಾತನಾಡಿ, ಆರೋಗ್ಯವಂತ ದೇಹದಲ್ಲಿ ಮಾತ್ರ ಉತ್ತಮ ಮನಸ್ಥಿತಿ ಹಾಗೂ ಬುದ್ಧಿಶಕ್ತಿ ಇರಲು ಸಾಧ್ಯ. ಕ್ರೀಡೆ ಆರೋಗ್ಯವಂತ ದೇಹವನ್ನು, ಮನಸ್ಸಿಗೆ ಉಲ್ಲಾಸ ಎರಡನ್ನೂ ಕೊಡುತ್ತದೆ. ಆದ್ದರಿಂದ ಕ್ರೀಡೆ ನಮ್ಮ ಜೀವನದಲ್ಲಿ ಅತ್ಯಂತ ಮಹತ್ವವಾದದ್ದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಹಾಗೂ ತ್ರಿಶಾ ಕಾಲೇಜು ಅಳಕೆ ಮಂಗಳೂರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ ಗುರುಪ್ರಸಾದ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ|ಇಂದುರೀತಿ, ದೈಹಿಕ ಶಿಕ್ಷಣ ಶಿಕ್ಷಕ ಶಶಿಕಿರಣ್ ಹಾಗೂ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.