ಉಡುಪಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ವತಿಯಿಂದ ಜಿಲ್ಲೆಯ ಪ್ರವರ್ಗ-ಸಿ ದೇವಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಆರೋಗ್ಯ ವಿಮೆ ಸೌಲಭ್ಯ ಪಡೆಯಲು, ನೌಕರರ ಹೆಸರು, ಹುದ್ದೆಗೆ ಸೇರಿದ ದಿನಾಂಕ, ಹುಟ್ಟಿದ ದಿನಾಂಕ, ಬ್ಯಾಂಕಿನ ಹೆಸರು, ಬ್ಯಾಂಕ್ ಖಾತೆಯ ಸಂಖ್ಯೆ, ಐ.ಎಫ್.ಎಸ್.ಸಿ ಕೋಡ್ ವಿವರವನ್ನು ಜೂನ್ 26 ರ ಒಳಗಾಗಿ ಸಹಾಯಕ ಆಯುಕ್ತರ ಕಚೇರಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575660 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.