ಸಿದ್ದಾಪುರ: ಶತಮಾನೋತ್ಸವ ಸಂಭ್ರಮಾಚರಣೆಯ ಸಮೀಪದಲ್ಲಿರುವ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಸ್ವಂತ ಬಂಡವಾಳದಿಂದ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಟ್ಟಡ ‘ಕದಿರು’ ಜೂ. 26ರಂದು ಉದ್ಘಾಟನೆ ಗೊಂಡಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ನೂತನ ಕಟ್ಟಡ ಹಾಗೂ ಆಡಳಿತ ಮಂಡಳಿಯ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.
ವಿಧಾನ ಪರಿಷತ್ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಬ್ಯಾಂಕಿಂಗ್ ವಿಭಾಗ ಮತ್ತು ಸಭಾ ಭವನ ಉದ್ಘಾಟಿಸಿದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ ರಾವ್ ಅವರು ಭದ್ರತಾ ಕೊಠಡಿ ಹಾಗೂ ಭದ್ರತಾಕೋಶವನ್ನು ಉದ್ಘಾಟಿಸಿದರು.
ದ.ಕ. ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಗೋದಾಮನ್ನು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಎ. ಜಯರಾಮ ಭಂಡಾರಿ ಅಧ್ಯಕ್ಷತೆ ವಹಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಎಸ್. ಕೆ. ವಾಸುದೇವ ಪೈ ಸಿದ್ದಾಪುರ, ಪೂರ್ಣಿಮಾ ನಾಯ್ಕ ಹಳ್ಳಿಹೊಳೆ, ಸಿದ್ದಾಪುರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರೋಜಿನಿ ಶೆಟ್ಟಿ, ಹೊಸಂಗಡಿ ಗ್ರಾ. ಪಂ. ಅಧ್ಯಕ್ಷೆ ಯಶೋಧ ಶೆಟ್ಟಿ, ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ಮೇಲ್ವಿಚಾರಕ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಸಂಘದ ಉಪಾಧ್ಯಕ್ಷ ಜಯರಾಮ ಗಾಣಿಗ, ನಿರ್ದೇಶಕ ಡಿ. ಗೋಪಾಲಕೃಷ್ಣ ಕಾಮತ್, ಚಂದ್ರಪ್ರಕಾಶ ಶೆಟ್ಟಿ, ಕೆ. ಸತೀಶ್ ಕುಮಾರ್ ಶೆಟ್ಟಿ ಕಡ್ರಿ, ಬಿ. ಆನಂದ ಶೆಟ್ಟಿ ಭಾಗೀಮನೆ, ಎಸ್. ಕೆ. ವಾಸುದೇವ ಪೈ, ಶಂಕರ ಶೆಟ್ಟಿ ನಳಾಲು, ರಾಘವ ನಾಯ್ಕ, ರೇವತಿ ಶೆಟ್ಟಿ, ರತ್ನ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಗಾಣಿಗ ಹಾಗೂ ಸಿಬಂದಿ ಉಪಸ್ಥಿತರಿದ್ದರು.












