ಉಡುಪಿ: ಆದರ್ಶ ಆಸ್ಪತ್ರೆ ಮತ್ತು ಆದರ್ಶ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ವೈದ್ಯರ ದಿನಾಚರಣೆಯ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭವು ಆದರ್ಶ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಜುಲೈ 2 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.
ಆಸ್ಪತ್ರೆಯ ತಜ್ಞ ವೈದ್ಯರು ಇದರಲ್ಲಿ ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವಂತೆ ಆಸ್ಪತ್ರೆಯ ಎಂ.ಡಿ ಡಾ. ಜಿ.ಎಸ್ ಚಂದ್ರಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.