ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ಶಿಷ್ಯೋಪನಯನ

ಮಣಿಪಾಲ: ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದಿರುವ ಮೊದಲ ವರ್ಷದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಕಾರ್ಯಕ್ರಮವು ಇತ್ತೀಚಿಗೆ ಕಾಲೇಜಿನ ಬುದ್ಧಾಯುರ್ವೇದ ಸಭಾಂಗಣದಲ್ಲಿ ನೆರವೇರಿತು.

ಧನ್ವಂತರಿ ಹೋಮ ಮತ್ತು ಪೂಜೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ, ವಿದ್ಯಾರ್ಥಿಗಳಿಗೆ ಆಯುರ್ವೇದ ವಿದ್ಯಾಭ್ಯಾಸದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಸಂಸ್ಥೆಯ ನಿರ್ದೇಶಕ ಡಾ.ಎಮ್.ವಿ ಶೆಟ್ಟಿಯವರ ಮಾರ್ಗದರ್ಶನ ಮತ್ತು ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟಿಯವರಾದ ಶ್ರೀಮತಿ
ಹೇಮಲತಾ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಉಪಪ್ರಾಂಶುಪಾಲ ಹರಿಪ್ರಸಾದ್ ಭಟ್, ಅಧ್ಯಾಪಕ ವೃಂದ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದರು.