ಕಟಪಾಡಿ: ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಜೂನ್ 29 ರಂದು ಹಮ್ಮಿಕೊಳ್ಳಲಾಯಿತು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪುಸ್ತಕ ವಿತರಿಸಿದರು.
ಉಚಿತ ಪುಸ್ತಕ ವಿತರಣೆ ಮಾಡಿದ ಗುರ್ಮೆ ಸುರೇಶ್ ಶೆಟ್ಟಿ, ಸಮಾನ ಮನಸ್ಕ ತಂಡ ಹಾಗೂ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರ ಕೆ. ಮುರಳಿಧರ ಆಚಾರ್ಯ, ನಿವೃತ್ತ ಯೋಧ ವಾದಿರಾಜ ಆಚಾರ್ಯ, ಕಾಪು ಕಾಳಿಕಾಂಬಾ ದೇವಸ್ಥಾನ ಮೊಕ್ತೇಸರ ಶೇಖರ ಆಚಾರ್ಯ, ಗಣೇಶ್ ಆಚಾರ್ಯ ಉಚ್ಚಿಲ, ಭಾಸ್ಕರ ಆಚಾರ್ಯ, ಚಂದ್ರಶೇಖರ ಆಚಾರ್ಯ, ದಿವಾಕರ ಆಚಾರ್ಯ, ಕಾರ್ತಿಕ್ ಆಚಾರ್ಯ, ಬಿ.ಎ ಆಚಾರ್ಯ ಮಣಿಪಾಲ, ರವಿ ಪುರೋಹಿತ ಉಪಸ್ಥಿತರಿದ್ದರು.