ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್

ರಾಜ್ಯ ಮಣಿಪುರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಕೊನೆಗೊಳ್ಳದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ರಾಜೀನಾಮೆಗೆ ವಿರೋಧ ಪಕ್ಷಗಳು ಆಗ್ರಹಿಸಿದ್ದವು.‌ ಜೂನ್ 30 ರಂದು ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಲಾಗಿತ್ತು ಆದರೆ ರಾಜೀನಾಮೆ ನೀಡುವುದಿಲ್ಲ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಈ ನಿರ್ಣಾಯಕ ಘಟ್ಟದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.