ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 4 ರಿಂದ 6 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
220/110/11 ಕೆ.ವಿ ಕೇಮಾರ್ ವಿದ್ಯುತ್ ಉಪಕೇಂದ್ರದಿAದ ಹೊರಡುವ 11 ಕೆವಿ ಫೀಡರ್ ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೆ, ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಿಟ್ಟೆ, ನಿಟ್ಟೆ ಕಾಲೇಜು, ನಿಟ್ಟೆ ವಾಟರ್ ಸಪ್ಲೆ, ಬೊರ್ಗಲ್ ಗುಡ್ಡೆ, ಹಾಮಾಜೆ, ಕುಂಟಾಡಿ, ಕೈರಬೆಟ್ಟು, ನಿಟ್ಟೆ ಪಂಚಾಯತ್, ನಿಟ್ಟೆ ಮಸೀದಿ, ಲೆಮಿನಾ ಇಂಡಸ್ಟ್ರಿಸ್, ದೂಪದಕಟ್ಟೆ, ಕೆಮ್ಮಣ್ಣು, ನೆಲ್ಲಿಗುಡ್ಡೆ, ಬಾರಾಡಿ, ಬೇಲಾಡಿ, ಕಾಂತಾವರ, ಕಲ್ಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, 110/11 ಕೆ.ವಿ ಕಾರ್ಕಳ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11 ಕೆ.ವಿ ಅಜೆಕಾರು ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕಡ್ತಲ, ಗುಡ್ಡೆಯಂಗಡಿ, ದೊಂಡರಂಗಡಿ, ಎಳ್ಳಾರೆ, ಕಾಡುಹೊಳೆ, ಅಜೆಕಾರು ಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/33/11 ಕೆ.ವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿ.ಪಿ.ನಗರ, ವಿ.ಆರ್.ನಗರ ಮತ್ತು ರೋಯಲ್ ಎಂಬೆಸಿ ಫೀಡರಿನಲ್ಲಿ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸಿಂಡಿಕೇಟ್ ಸರ್ಕಲ್, ಎಂ.ಜಿ.ಸಿ ಸ್ಕೂಲ್, ಬಿ.ಎಸ್.ಎನ್.ಎಲ್, ಟೆಲಿಫೋನ್ ಎಕ್ಸ್ ಚೇಂಜ್, ವಿದ್ಯಾರತ್ನ ನಗರ, ಡಿ.ಸಿ ಆಫೀಸ್, ಆರ್.ಟಿ.ಓ ಆಫೀಸ್, ಪೆರಂಪಳ್ಳಿ, ಸಗ್ರಿ ನೋಳೆ, ರೋಯಲ್ ಎಂಬೆಸಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 4 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
110/11 ಕೆ.ವಿ ಮಧುವನ ಉಪಕೇಂದ್ರದಿಂದ ಹೊರಡುವ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ, 110/11 ಕೆ.ವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಚೇರ್ಕಾಡಿ, ಕೊಕ್ಕರ್ಣೆ ಮತ್ತು ಹೊನ್ನಾಳ ಫೀಡರ್ ಮಾರ್ಗದಲ್ಲಿ ಹಾಗೂ 110/11ಕೆ.ವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆ.ವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಾವರ, ರಥಬೀದಿ ಪೇಟೆ, ನಂದಿಗುಡ್ಡೆ, ಕೊಳಂಬೆ, ಮಾರಿಕಟ್ಟೆ, ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಢ್ಡು, ಗಣೇಶ್ ಕಲಾಮಂದಿರ, ಕೆ.ಕೆ.ಪಾರ್ಮ್ಸ್, ಆದರ್ಶನಗರ, ಕೀರ್ತಿನಗರ, ಸಾಲಿಕೇರಿ, ಬಿರ್ತಿ, ಹೊನ್ನಾಳ, ಕುಕ್ಕುಡೆ, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, ಶಾಂತಿವನ, ಗರಡಿಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 4 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11 ಕೆ.ವಿ ಹೆಬ್ರಿ ಉಪವಿದ್ಯುತ್ ಸ್ಥಾವರದಿಂದ ಹೊರಡುವ 11ಕೆವಿ ಶಿವಪುರ, ಚಾರ, ಮುದ್ರಾಡಿ ಫೀಡರಿನಲ್ಲಿ ವ್ಯವಸ್ಥಾ ಸುಧಾರಣಾ ಕಾಮಗಾರಿ ಹಾಗೂ ಮಾರ್ಗನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಚಾರ, ಹೊಸೂರು, ಶಿವಪುರ, ಭಟ್ಟಂಪಳ್ಳಿ, ಪಾಂಡುಕಲ್ಲು, ಎಳ್ಳಾರೆ, ಶಂಕರಲಿಂಗೇಶ್ವರ ದೇವಸ್ಥಾನದ ಬಳಿ, ಮುಳ್ಳುಗುಡ್ಡೆ, ಕನ್ಯಾನ, ಸರ್ಕಾರಿ ಆಸ್ಪತ್ರೆ ಬಳಿ, ಮುದ್ರಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 5 ರಂದು ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33/11ಕೆವಿ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ನಲ್ಲಿ ಕೇಬಲ್ ಕಟ್ ಮಾಡಿ Pಔಖಿ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಶಿರ್ವ ಎಂ.ಯು.ಎಸ್.ಎಸ್ ನ ಬ್ಯಾಂಕ್-1 ರಿಂದ ಹೊರಡುವ 11ಕೆವಿ ಬಂಟಕಲ್ಲು, ಶಿರ್ವ ಹಾಗೂ ಮುದರಂಗಡಿ ಫೀಡರ್ ಮಾರ್ಗದಲ್ಲಿ ಉಳಿಯಾರಗೋಳಿ ಗ್ರಾಮ, ಬಂಟಕಲ್ಲು ಗ್ರಾಮ, ಮೂಡಬೆಟ್ಟು ಗ್ರಾಮ, ಪಾಂಗಳ ಗ್ರಾಮ, ಶಿರ್ವ ಗ್ರಾಮ, ಮಟ್ಟಾರು ಗ್ರಾಮ, ಪದವು ಪಾಂಬೂರು, ಪಂಜಿಮಾರು, ಪಿಲಾರು ಖಾನ, ಪೆರ್ನಾಲು, ಕುತ್ಯಾರು, ಪುಂಚಲಕಾಡು, ಕಳತ್ತೂರು ಗ್ರಾಮ, ಚಂದ್ರನಗರ, ಮಲ್ಲಾರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜುಲೈ 6 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.