ಹೆಬ್ರಿ: ತಮ್ಮಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ತರಬೇತಿ ನೀಡಿದಾಗ ಮಾತ್ರ ಆ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ.ಈ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ಕಳೆದ 9 ವಷ೯ಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಾಪ್ರಕಾರಗಳನ್ನು ತರಬೇತಿ ನೀಡುವುದರ ಜತೆಗೆ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತಿದೆ. ಪೋಷಕರು ತಮ್ಮಮಕ್ಕಳನ್ನು ಇಂತಹ ತರಗತಿಗಳಿಗೆ ಸೇರಿಸುವುದರ ಮೂಲಕ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸಿ ಎಂದು ಜೇಸಿಐ ಹೆಬ್ರಿ ಇದರ ಅಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದರು.
ಅವರು ಜು.2 ರಂದು ಚಾಣಕ್ಯ ಏಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಹೆಬ್ರಿ ಎಸ್ .ಆರ್ .ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಆರಂಭಗೊಂಡ ಭರತನಾಟ್ಯ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲೆ ವೀಣಾ ಯು ಶೆಟ್ಟಿ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮಾತನಾಡಿ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಕೂಡ ಇಂತಹ ತರಬೇತಿಯಿಂದ ವಂಚಿತರಾಗ ಬಾರದು ಎಂದು ಕಳೆದ ವಷ೯ ಸುಮಾರು 50 ವಿದ್ಯಾರ್ಥಿಗಳಿಗೆ ಉಚಿತ ಚಿತ್ರಕಲೆ ತರಬೇತಿಯನ್ನು ನೀಡಿದ್ದೇವೆ.ಅಲ್ಲದೆ ಕಳೆದ ಹಲವಾರು ವಷ೯ಗಳಿಂದ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಚೆಸ್ ತರಬೇತಿಯನ್ನು ನೀಡುತ್ತಾ ಬರಲಾಗಿತ್ತಿದೆ. ಕೇವಲ ತರಬೇತಿ ಮಾತ್ರವಲ್ಲದೆ ಜಿಲ್ಲಾ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಸಿಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ.
ವಿವಿಧ ಸಮಾರಂಭದಲ್ಲಿ ಮಕ್ಕಳ ಪ್ರತಿಭಾ ಪ್ರದಶ೯ನ ನೀಡುವುದರ ಜತೆ ಟಿವಿ ಮಾಧ್ಯಮಗಳ ಮೂಲಕ ಜನಮಾನಸಕ್ಕೆ ತಲುಪಿಸುವ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತಿದೆ. ಪ್ರತಿ ಭಾನುವಾರ ಈಗಾಗಲೇ ಚಿತ್ರಕಲೆ ,ಶಾಸ್ತ್ರೀಯ ಸಂಗೀತ , ಕರೋಕೆ,ಚೆಸ್ ,ಫಿಲ್ಮ್ ಡಾನ್ಸ್ ತರಗತಿಗಳು ನಡೆಯುತ್ತಿದ್ದು ಈ ದಿನ ಭರತನಾಟ್ಯ ತರಬೇತಿ ಪ್ರಾರಂಭಗೊಂಡಿದ್ದು ಅವಕಾಶ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಹಿರಿಯಡಕದ ಕನಾ೯ಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕ ವಿಜಯ,ಜೇಸಿರೆಟ್ ಪೂವಾ೯ಧ್ಯಕ್ಷೆ ಗೀತಾ ಮಂಜುನಾಥ, ಭರತನಾಟ್ಯ ಗುರು ಧನ್ಯ ವೇಣೂರು,ಶಾಸ್ತ್ರೀಯ ಸಂಗೀತ ಗುರು ಸ್ವಾತಿ ಭಟ್ ,ಜೇಸಿಐ ಪೂವಾ೯ಧ್ಯಕ್ಷ ಮಂಜುನಾಥ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಶಾಸ್ತ್ರೀಯ ಸಂಗೀತ ವಿದ್ಯಾರ್ಥಿನಿ ಶ್ರೇಷ್ಠ ಪ್ರಾಥಿ೯ಸಿದರು.
ಸಂಸ್ಥೆಯ ಅಧ್ಯಕ್ಷ ಉದಯ ಶೆಟ್ಟಿ ಸ್ವಾಗತಿಸಿ, ಮುದ್ರಾಡಿ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕ ಬಲ್ಲಾಡಿ ಚಂದ್ರಶೇಖರ್ ಭಟ್ ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.