ಬೆಂಗಳೂರು, ಹುಬ್ಬಳ್ಳಿ, ಮೈಸೂರು 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಒಟ್ಟು 904 ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೈರುತ್ಯ ರೈಲ್ವೆಯಲ್ಲಿ (SWR) ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್​​ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಘಟಕ ಅರ್ಜಿ ಆಹ್ವಾನಿಸಿದೆ.

ಒಂದು ವರ್ಷದ ಗುತ್ತಿಗೆ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ ಆಸಕ್ತಿ ಹೊಂದಿರುವ ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆ ವಿವರ: ಮೂರು ವಿಭಾಗಗಳಲ್ಲಿ ಫಿಟ್ಟರ್​, ವೆಲ್ಡರ್​​, ಮೆಕಾನಿಸ್ಟ್​​, ಎಲೆಕ್ಟ್ರಿಷಿಯನ್​​, ಕಾರ್ಪೆಂಟರ್​​, ಪೈಂಟರ್​​, ಸ್ಟೆನೋಗ್ರಾಫರ್​, ಪ್ರೊಗ್ರಾಮಿಂಗ್​ ಅಂಡ್​ ಸಿಸ್ಟಂ ಅಡ್ಮಿನಿಸ್ಟ್ರೇಷನ್​ ಅಸಿಸ್ಟೆಂಟ್ ಅಪ್ರೆಂಟಿಸ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುಬ್ಬಳ್ಳಿ ವಿಭಾಗದಲ್ಲಿ ಒಟ್ಟು 237, ಹುಬ್ಬಳ್ಳಿಯ ಕ್ಯಾರೇಜ್​ ರಿಪೇರಿ ವರ್ಕ್​ಶಾಪ್​ನಲ್ಲಿ 217, ಬೆಂಗಳೂರು ವಿಭಾಗದಲ್ಲಿ 230, ಮೈಸೂರು ವಿಭಾಗದಲ್ಲಿ 177, ಮೈಸೂರು ಸೆಂಟ್ರಲ್​​ ವರ್ಕ್​ಶಾಪ್​ನಲ್ಲಿ 43 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ಐಟಿಐ ಅಥವಾ ಎನ್​ಟಿಸಿಯನ್ನು ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 24 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅರ್ಜಿ ಸಲ್ಲಿಕೆಗೆ ನೈರುತ್ಯ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣ swr.indianrailways.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ವಿಕಲಚೇತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ, ಸಂಪೂರ್ಣವಾಗಿ ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳು ಸಂಪೂರ್ಣ ತಾತ್ಕಾಲಿಕವಾಗಿದ್ದು, ಒಂದು ವರ್ಷದ ಗುತ್ತಿಗೆ ಅವಧಿಗೆ ನೇಮಕ ನಡೆಯಲಿದೆ. ಈ ವೇಳೆ ಅಭ್ಯರ್ಥಿಗಳಿಗೆ ಮಾಸಿಕ ಸ್ಟೈಫಂಡ್​ ಅನ್ನು ನೀಡಲಾಗುವುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಜುಲೈ 3ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 2ಆಗಿದೆ.