ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾದ ಹಿನ್ನೆಲೆ, ಜಿಲ್ಲೆಯಲ್ಲಿ ಜುಲೈ 5ರಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಾಳೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.