ಜುಲೈ 8 ರಂದು ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಜಿಲ್ಲಾ ಪ್ರವಾಸ

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಮಧ್ಯಾಹ್ನ 12 ಗಂಟೆಗೆ ಪಡುಬಿದ್ರಿ ಮತ್ತು ಉಡುಪಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವರು. ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. 5 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ಅತಿವೃಷ್ಠಿಯಾಗುತ್ತಿದ್ದು ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ಸಭೆ ನಡೆಸುವರು. ನಂತರ ಸಂಜೆ 7.30 ಕ್ಕೆ ಮಂಗಳೂರಿಗೆ ತೆರಳಲಿರುವರು.