ಮಣಿಪಾಲ: ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಡಾ. ಟಿಎಂಎ ಪೈ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರವೇಶ ಆರಂಭಗೊಂಡಿದೆ.

ಸಂಸ್ಥೆಯಲ್ಲಿ 3 ವರ್ಷದ (6 ಸೆಮಿಸ್ಟರ್) ಡಿಪ್ಲೋಮಾ ಎಂಜಿನಿಯರಿಂಗ್ ಪ್ರವೇಶಕ್ಕೆ ಕೆಲವು ಕೋರ್ಸ್ ಗಳಲ್ಲಿ ರಾಜ್ಯದ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕಾಯ್ದಿರಿಸಿದ ಕೆಲವೇ ಸೀಟುಗಳು ಭರ್ತಿಯಾಗಲು ಬಾಕಿ ಇವೆ. ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದು.

ಆಟೋಮೊಬೈಲ್ ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕಟ್ರಾನಿಕ್ಸ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಕೋರ್ಸುಗಳು ಲಭ್ಯವಿವೆ.

ಹೆಚ್ಚಿನ ಮಾಹಿತಿಗೆ ಇ-ಮೇಲ್ : manipal.polytech@gmail.com ಅಥವಾ ವೆಬ್ ಸೈಟ್ : www.tmapaipolytechnic.com ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.