ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಕೆ. ಐ.ಎ.ಎಸ್ ಅವರನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಉಳ್ಳಾಲ ತಾಲೂಕಿನ ಹಾವೂರು ಗ್ರಾಮದ ವಿದ್ಯಾಕುಮಾರಿ 2014 ಬ್ಯಾಚ್ ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯಾಗಿ ಅವರನ್ನು ನೇಮಿಸಲಾಗಿದೆ. ಕೂರ್ಮಾ ರಾವ್ ಎಂ ಅವರು ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.