ಉಡುಪಿ: ರಾಯಚೂರಿನಲ್ಲಿ ಕಾರ್ಮಿಕರ ಪ್ರತಿಭಟನೆಯ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗೆ ಎಚ್.ಡಿ.ಕುಮಾರಸ್ವಾಮಿ ಅವರು, “ನರೇಂದ್ರ ಮೋದಿಗೆ ವೋಟ್ ಹಾಕಿದ್ದಿರಾ, ಸಮಸ್ಯೆ ಬಗ್ಗೆ ನಮ್ಮ ಜೊತೆ ಹೇಳ್ತಿರಾ, ಅವರನ್ನೇ ಕೇಳಿ” ಎಂಬ ಉದ್ದಟತನದ ಹೇಳಿಕೆ ಹೇಳಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಗಣೇಶ್ ಹೇಳಿದ್ದಾರೆ.
ಕುಮಾರಸ್ವಾಮಿ ಅವರು ತಾವು ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಸಮಸ್ಯೆಗೆ ಸ್ಪಂದಿಸುವುದು ಅವರ ಕರ್ತವ್ಯ. ಅದಲ್ಲದೇ ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹತಾಶೆಯಿಂದ ರಾಜ್ಯದ ಜನರನ್ನು ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಬೇಕಾಗುತ್ತದೆ ಎನ್ನುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಮಾಡಿದ್ದಾರೆ.
ಅವರಿಗೆ ರಾಜ್ಯದ ಮುಖ್ಯಮಂತ್ರಿ ಮುಂದುವರಿಯುವ ಅರ್ಹತೆ ಇಲ್ಲ. ಆದ್ದರಿಂದ ಅವರು ತಕ್ಷಣ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೇ ರಾಜೀನಾಮೆ ನೀಡಬೇಕು ಎಂದು ನಯನಾ ಗಣೇಶ್ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.