ಡಾ. ಜಿ. ಸಂತೋಷ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಬುಧವಾರದಂದು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್, ದ.ಕ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾಗಿ ಹಾಗೂ ಪಾಲಿಕೆಯ ಜಂಟಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ.

ಅಪರ ಜಿಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಾಣಿಕ್ಯ ಹೊಸ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದ್ದಾರೆ.