ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕು ಘಟಕ ಹಾಗೂ ಕಾರ್ಕಳ ಕುಂದಾಪ್ರದವರ ಸಹಯೋಗದಲ್ಲಿ ಕಾರ್ಕಳದ ಹೋಟೆಲ್ ಪ್ರಕಾಶ್ ನ ಉತ್ಸವ ಸಭಾಂಗಣದಲ್ಲಿ ಜುಲೈ 17 ರಂದು ಸಂಜೆ 4.30 ರಿಂದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಕಾರ್ಕಳ-ಕುಂದಾಪ್ರ ಕನ್ನಡ ಹಬ್ಬ 2023 ಅನ್ನು ಆಚರಿಸಲಾಗುತ್ತಿದೆ.
ಕಾರ್ಯಕ್ರಮವನ್ನು ಕ.ರಾ.ಹಿಂ.ವ.ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ರಂಗ ಸಂಸ್ಕೃತಿ ಕಾರ್ಕಳ ಇದರ ಅಧ್ಯಕ್ಷ ನಿತ್ಯಾನಂದ ಪೈ, ಜನಪದ ಕಲಾವಿದ ನಾಗರಾಜ್ ಪಾಣಾರ, ಖ್ಯಾತ ಸಾಹಿತಿ ಓಂಗನೇಶ್ ಉಪ್ಪುಂದ, ರಂಗಭೂಮಿ ಕಲಾವಿದೆ ಪ್ರತಿಮಾ ನಾಯಕ್, ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವ್ರ ಸುರೇಂದ್ರ ಅಡಿಗ, ಕಾರ್ಕಳ ತಾಲೂಕು ಘಟಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.