ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಈ ಪರೀಕ್ಷೆಯ ಅರ್ಹತೆಯನ್ನು ನಿಗದಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ನಡೆಯುವ ಈ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 5 ಕಡೆಯ ದಿನಾಂಕವಾಗಿದೆ. ಈ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಶಿಕ್ಷಕರ ಹುದ್ದೆಗಾಗಿ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆ ಬಂಪರ್ ಸುದ್ದಿ ನೀಡಿದೆ.
ಅರ್ಜಿ ಶುಲ್ಕ: ಈ ಹುದ್ದೆಗೆ ವಿಶೇಷ ಅಗತ್ಯತೆಯುಳ್ಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ವಿದ್ಯಾರ್ಹತೆ:
ಪತ್ರಿಕೆ 1(1ರಿಂದ 5ನೇ ತರಗತಿ):
ಪಿಯುಸಿ ಪರೀಕ್ಷೆಯಲ್ಲಿ ಶೇ 50 ಅಂಕ ಗಳಿಸಿರಬೇಕು. ಜೊತೆಗೆ ಎರಡು ವರ್ಷದ ಡಿಎಡ್ ಕೋರ್ಸಿನಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ ನಾಲ್ಕು ವರ್ಷದ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ಅಥವಾ ಎರಡು ವರ್ಷದ ಡಿಪ್ಲೋಮೋ ಇನ್ ಎಜುಕೇಶನ್ ಅಥವಾ ಬಿಎಡ್ ಪದವಿಯನ್ನು ಪೂರ್ಣಗೊಳಿಸರಬೇಕು. ಈ ಕೋರ್ಸ್ಗಳ ಪ್ರವೇಶಕ್ಕೆ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪತ್ರಿಕೆ 2: ಪದವಿಯಲ್ಲಿ ಕನಿಷ್ಠ 50ರಷ್ಟು ಅಂಕ ಗಳಿಸಿರಬೇಕು. ಜೊತೆಗೆ ಎರಡು ವರ್ಷದ ಡಿಎಲ್.ಎಡ್ ಅಥವಾ ಬಿಇಡಿ ಪದವಿ ಅಥವಾ ನಾಲ್ಕು ವರ್ಷದ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್ ಅಥವಾ ಎರಡು ವರ್ಷದ ಬಿಇಡಿ (ವಿಶೇಷ ಶಿಕ್ಷಣ)ದಲ್ಲಿ ತೇರ್ಗಡೆ ಹೊಂದಿದ ಹಾಗೂ ಪ್ರವೇಶ ಪಡೆದು ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಪತ್ರಿಕೆ-1 ಅಥವಾ ಪ್ರತಿಕೆ-2 (ಎರಡರಲ್ಲಿ ಒಂದಕ್ಕೆ ಅರ್ಜಿ ಸಲ್ಲಿಕೆ)
ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು- 700 ರೂ
ಪ.ಜಾ, ಪ. ವರ್ಗ, ಪ್ರವರ್ಗ-1 -350 ರೂ
ಪತ್ರಿಕೆ-1 ಹಾಗೂ ಪತ್ರಿಕೆ-2 (ಎರಡು ಪತ್ರಿಕೆ ಅರ್ಜಿ ಸಲ್ಲಿಕೆಗೆ)
ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು- 1000 ರೂ
ಪ.ಜಾ, ಪ. ವರ್ಗ, ಪ್ರವರ್ಗ-1 -500 ರೂ
ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಅಭ್ಯರ್ಥಿಗಳು https://www.schooleducation.kar.nic.in/ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ಸಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ಭರ್ತಿಗೂ ಮುನ್ನ ಸಂಪೂರ್ಣ ಅಧಿಸೂಚನೆಯನ್ನು ಪರಿಶೀಲಿ ಮುಂದುವರೆಯಬೇಕು. ಬಳಿಕ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆ ಜುಲೈ 14 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 5 ಆಗಿದೆ. ಶುಲ್ಕ ಪಾವತಿಗೂ ಕೂಡ ಆಗಸ್ಟ್ 5 ಕಡೆಯ ದಿನವಾಗಿದೆ.
ಅಧಿಸೂಚನೆ
ಪ್ರವೇಶ ಪತ್ರ:
ಈ ಹುದ್ದೆಗೆ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಗಸ್ಟ್ 23 ರಿಂದ ಸೆಪ್ಟೆಂಬರ್ 1ರಿಂದ ಇಲಾಖೆಯ ವೆಬ್ಸೈಟ್ www.schooleducation.kar.nic.in ನಲ್ಲಿ ಪಡೆದುಕೊಳ್ಳಬಹುದು.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ schooleducation.kar.nic.in ಗೆ ಭೇಟಿ ನೀಡಬಹುದಾಗಿದೆ.