ಬೆಂಗಳೂರು: ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನಿಂದ ವರ್ತಿಸಿದ ಕಾರಣ ಯು.ಟಿ.ಖಾದರ್ ಅವರು ೧೦ ಶಾಸಕರ ಅಮಾನತು ಮಾಡಿದ್ದಾರೆ . ಸ್ಪೀಕರ್ ಪೀಠ ಮತ್ತು ಸದನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಬಿಜೆಪಿ ಶಾಸಕರಾದ ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ,ವೇದವ್ಯಾಸ ಕಾಮತ್, ವಿ.ಸುನಿಲ್ ಕುಮಾರ್,ಆರ್.ಅಶೋಕ್, ಆರಗ ಜ್ಞಾನೇಂದ್ರ, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ ಇವರೆಲ್ಲರನ್ನು ಅಮಾನತು ಮಾಡಿದ್ದಾರೆ . ಅಷ್ಟಲ್ಲದೇ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ಸ್ಪೀಕರ್ಗೆ ದೂರು ನೀಡಿದ್ದರು.ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿಯಾದ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಹಿನ್ನೆಲೆ ಸದನದಲ್ಲಿ ಭಾರಿ ಗದ್ದಲ ಸೃಷ್ಟಿಯಾಗಿತ್ತು