ಬೆಂಗಳೂರು: ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಶಾಲಾ ಮಕ್ಕಳಿಗೆ ಬೈಸಿಕಲ್ ವಿತರಣೆ ಯೋಜನೆಗೆ ಮರು ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಈ ಕುರಿತು ಮತನಾಡಿದ ಸಿಎಂ, ಶಾಲಾ ಮಕ್ಕಳ ಸೈಕಲ್ ವಿತರಣೆ ಯೋಜನೆ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಯೋಜನೆ ಪುನಾರಂಭಿಸುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
2006-07ರಲ್ಲಿ ಆರಂಭಗೊಂಡ ಈ ಯೋಜನೆಯಡಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುವ ಸರಕಾರಿ ಶಾಲಾ ಮಕ್ಕಳಿಗೆ ಸರಕಾರದ ವತಿಯಿಂದ ಉಚಿತವಾಗಿ ಸೈಕಲ್‌ಗಳನ್ನು ನೀಡಲಾಗುತ್ತಿತ್ತು. ಆದರೆ ಈ ಯೋಜನೆಯನ್ನು ನಾಲ್ಕು ವರ್ಷಗಳಿಂದ ಸ್ಥಗಿತಗೊಳಿಸಲಾಗಿದ್ದು ಇದೀಗ ಮತ್ತೆ ಚಾಲನೆ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.