ಕಾಪು: ಮನೆ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಕಾಪು: ತಾಲೂಕಿನಲ್ಲಿ ಸುರಿದ ಮಳೆಗೆ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡಬೆಟ್ಟು ನಿವಾಸಿ ಗೋಪಾಲ ಪಾಣಾರ ಎಂಬವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಜು. 24 ರಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದರು.

ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ನೀಡುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಬಲ್ಲಾಳ್, ಸವಿತಾ ಎ ಶೆಟ್ಟಿ, ಸುಜಲಾ ಪೂಜಾರಿ, ಕೋಟೆ ಗ್ರಾಮ ಪಂಚಾಯತ್ ಸದಸ್ಯ ರತ್ನಾಕರ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕೃಪಾ ರಾವ್, ಶಕ್ತಿ ಕೇಂದ್ರದ ಸಂಚಾಲಕ ನಿತಿನ್, ಬೂತ್ ಅಧ್ಯಕ್ಷ ಕರುಣಾಕರ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಮ ಪಾಣರ, ಪಕ್ಷದ ಪ್ರಮುಖ ಮುರಳಿಧರ ಪೈ, ಶಾಂತ ಪೂಜಾರಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.