ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ ಸಿ ವೃಂದದ ಕಲ್ಯಾಣ ಸಂಘಟಕರು-14 ಹುದ್ದೆಗಳ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಭೂ ಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನ ರ್ಯಾಂಕ್ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ 20 ದಿನಗಳ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ದೂರವಾಣಿ ಸಂಖ್ಯೆ : 080-25589459 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.