ಸಂಶೋಧಕ, ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರ್ ಇವರಿಗೆ ಮಾತೃವಿಯೋಗ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ವಿಶ್ರಾಂತ ಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರ ತಾಯಿ ಸುಂದರಿ ಶೆಟ್ಟಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪ್ರಸೂತಿ ತಜ್ಞೆಯಾಗಿದ್ದ ಇವರು 70ಕ್ಕೂ ಹೆಚ್ಚು ನೈಸರ್ಗಿಕ ಹೆರಿಗೆಗಳನ್ನು ಮಾಡಿಸಿದ್ದರು.

ಸುಂದರಿ ಶೆಟ್ಟಿ ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.