ಬೈಂದೂರು: ಬೈಂದೂರು ತಾಲೂಕು ನಾವುಂದದಲ್ಲಿ ತೀವ್ರ ಮಳೆಯಿಂದ ನೆರೆ ಪೀಡಿತವಾಗಿರುವ ಪ್ರದೇಶ ಮತ್ತು ನಿರೋಡಿಯಲ್ಲಿ ಸೇತುವೆಗೆ ಹಾನಿಯಾದ ಪ್ರದೇಶ ಹಾಗೂ ಕುಂದಾಪುರದ ತೆಕ್ಕಟ್ಟೆಯಲ್ಲಿರುವ ಸೈಕ್ಲೋನ್ ಶೆಲ್ಟರ್ಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನೆರೆ ಬಾಧಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.












