ಉಡುಪಿ: ನಗರದ ಪ್ಯಾರಾ ಮೆಡಿಕಲ್ ಕಾಲೇಜೊಂದರಲ್ಲಿ ವೀಡಿಯೋ ಚಿತ್ರೀಕರಣ ವಿವಾದ ಘಟನೆ ಸಂಬಂಧಿಸಿದಂತೆ ಇಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದ್ದಾರೆ.
ಸಂತ್ರಸ್ತೆ ವಿಧ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಯಬೇಕು ಎನ್ನುವ ಆಗ್ರಹ ಪ್ರತಿಭಟನಕಾರರಿಂದ ಕೇಳಿಬಂತು. ಸುರಿಯುತ್ತಿರುವ ಮಳೆಯಲ್ಲೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬರುವಂತೆ ಪಟ್ಟುಹಿಡಿದಿದ್ದಾರೆ. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.