ಉಡುಪಿ: ಖಾಸಗಿ ಕಾಲೇಜಿನ ವಾಶ್ ರೂಮಿನಲ್ಲಿ ರಹಸ್ಯ ಕ್ಯಾಮರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು. ಶಂಕಿತರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ. ಸೂಕ್ತ ತನಿಖೆಗೆ ಆಗ್ರಹಿಸುತ್ತಿದ್ದೇವೆ ಎಂದರು.
ಶುಕ್ರವಾರದಂದು ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಎಸ್ಪಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿದ ಪ್ರತಿಭಟನಾ ನಿರತರು ನ್ಯಾಯಕ್ಕಾಗಿ ಒತ್ತಾಯಿಸಿದರು.
ಪಕ್ಷದ ಶಾಸಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.