ಧಾರವಾಡದಲ್ಲಿ ನಿರಂತರ ಭೀಕರ ಮಳೆ ಹಿನ್ನೆಲೆ 198 ಮನೆಗಳಿಗೆ ಹಾನಿ

 

ಧಾರವಾಡ: ಕಳೆದ ಕೆಲವು ದಿನಗಳಿಂದ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದ್ದು, ಸದ್ಯ ಅಬ್ಬರ ಕೊಂಚ ಕಡಿಮೆಯಾಗಿದೆ. ಹಲವೆಡೆ ಮಳೆಯಿಂದಾಗಿ ಅಪಾರ ಆಸ್ತಿಪಾಸ್ತಿ ಹಾನಿ, ಸಾವು-ನೋವು ಸಂಭವಿಸಿದೆ.ಧಾರವಾಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ

 

8 ತಾಲೂಕುಗಳಲ್ಲಿ 198 ಮನೆಗಳಿಗೆ ಹಾನಿ: ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ತಾಲೂಕಿನಲ್ಲಿ 87 ಮನೆಗಳು, ಅಳ್ನಾವರ ತಾಲೂಕಿನಲ್ಲಿ 4, ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 11, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ 7, ಕಲಘಟಗಿ ತಾಲೂಕಿನಲ್ಲಿ 45, ಕುಂದಗೋಳ ತಾಲೂಕಿನಲ್ಲಿ 26, ನವಲಗುಂದ ತಾಲೂಕಿನಲ್ಲಿ 10 ಮತ್ತು ಅಣ್ಣಿಗೇರಿ ತಾಲೂಕಿನಲ್ಲಿ 8 ಮನೆಗಳೂ ಸೇರಿದಂತೆ ಜಿಲ್ಲೆಯ 8 ತಾಲೂಕುಗಳಲ್ಲಿ ಸುಮಾರು 198 ಮನೆಗಳು ತೊಂದರೆಗೀಡಾಗಿವೆ.ಧಾರವಾಡ ಜಿಲ್ಲೆಯಲ್ಲಿ ಜುಲೈ 26ರ ಬೆಳಿಗ್ಗೆ 8 ಗಂಟೆಯಿಂದ 27ರ ಬೆಳಿಗ್ಗೆ 8 ಗಂಟೆಯವರೆಗೆ ವಿವಿಧ ತಾಲೂಕುಗಳಲ್ಲಿ ಸುಮಾರು 198 ಮನೆಗಳಿಗೆ ಹಾನಿಯಾಗಿದೆ.

 

ಎಲ್ಲ ಪ್ರಕರಣಗಳ ಕುರಿತು ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಶೀಲ್ದಾರ್‌ಗೆ ಪ್ರಾಥಮಿಕ ವರದಿ ಸಲ್ಲಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ